September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುತ್ಲೂರು ಕಾರ್ಯಕ್ಷೇತ್ರದಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಯಂತ್ರಶ್ರೀ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗ್ರಾ.ಯೋ. ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ ಮಾಹಿತಿ ನೀಡಿ, ಮುಂಗಾರು ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಕೃಷಿ ಮಾಡಿದರೆ ಕಡಿಮೆ ಖರ್ಚು ಮತ್ತು ಕಡಿಮೆ ಸಮಯದಲ್ಲಿ ಭತ್ತದ ಕೃಷಿ ಮಾಡಬಹುದು.


ಭೂಮಿಯನ್ನು ಹದಗೊಳಿಸುವುದರಿಂದ ಕೊಯ್ಲುವರೆಗೂ ಸಂಪೂರ್ಣ ಯಾಂತ್ರಿಕೃತಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ. ಭತ್ತ ಕೃಷಿಯಿಂದ ವಿಮುಖರಾಗುತ್ತಿರುವ ರೈತರಿಗೆ ಭತ್ತ ಕೃಷಿಯನ್ನು ಆಕರ್ಷಣಿಯವಾಗಿ ಮಾಡುವುದು ಇದರ ಪ್ರಮುಖ ಉದ್ದೇಶ. ವೆಚ್ಚದಲ್ಲಿ ಕಡಿತಗೊಂಡು ಇಳುವರಿ ಹೆಚ್ಚಳವನ್ನು ಗಮನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಅಣ್ಣಿ ಎಂ.ಕೆ, ಒಕ್ಕೂಟದ ಉಪಾಧ್ಯಕ್ಷೆ ಜಯಂತಿ ಹಾಗೂ ರೋಹನ್, ರವೀಶ್, ಪೂವಪ್ಪ, ಸೇವಾ ಪ್ರತಿನಿಧಿ ಕೇಶವ ಪೂಜಾರಿ‌ ಉಪಸ್ಥಿತರಿದ್ದರು. ರೈತ ತಂಡದ ಸದಸ್ಯರು ಭಾಗವಹಿಸಿ ಇದರ ಪ್ರಯೋಜನ ಪಡೆದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!