25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡದ ವಿದ್ಯಾರ್ಥಿನಿ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.11 ರಂದು ನಡೆದಿದೆ.

ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪಾ ದಂಪತಿ ಪುತ್ರಿ ರೇಖಾ(15ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರ ತಂದೆ ಕೂಲಿ ಕೆಲಸ ಮಾಡುತ್ತಿದ್ದು, ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದ ರೇಖಾರವರು ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ರೇಖಾ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಖಾಳನ್ನು ಅತ್ತೆ ಒತ್ತಾಯದ ಮೇರೆಗೆ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಗೆ ಸೇರಿಸಿ ಓದುವಂತೆ ಹೇಳುತ್ತಿದ್ದರು ಎನ್ನಲಾಗಿದೆ. ಮಾನಸಿಕ ಒತ್ತಡಕ್ಕೆ ಒಳಗಾದ ರೇಖಾ ಇಲಿಪಾಷನ ಸೇವಿಸಿ ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಜೂ.11 ರಂದು ನಿಧನರಾಗಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!