23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ : ಭಾರತೀಯ ಸಂಸ್ಕೃತಿಯನ್ನು ಅಳವಡಿಸುವುದು, ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು. ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ನಾಗೇಶ್ ಉಡುಪ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಜೂ 11 ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕೆವೈ ಈಶ್ವರ ಭಟ್ ಮಂಜನಕ್ಕಿ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕೋಶಾಧಿಕಾರಿ ಆನಂದ ಟೈಲರ್ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 90 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

ಎಸ್.ಎಸ್.ಎಲ್.ಸಿ ಯಲ್ಲಿ 608 (97.23%) ಅಂಕ ಗಳಿಸಿದ ಬೊಳ್ಚಾಲು ರೀತಿಶ್ ಕುಲಾಲ್ ರವರನ್ನು ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಮಾ| ನಿತೇಶ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಪದ್ಮನಾಭ ಬಿಯದಡಿ ವಂದಿಸಿದರು.

Related posts

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
error: Content is protected !!