ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಅಗತ್ಯ ಸ್ಥಳಗಳಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು.
ಇಲ್ಲಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಚರಂಡಿಯ ಮೋರಿಗಳು ಕಸಕಡ್ಡಿ, ತ್ಯಾಜ್ಯಗಳಿಂದ ಬ್ಲಾಕ್ ಆಗಿ ಮಳೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಾಥಮಿಕ ಕೆಲಸಗಳನ್ನು ನಡೆಸಿದರೆ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸಂಚಾರಕ್ಕೆ ಆತಂಕಕಾರಿಯಾಗುವ ಸಂಭವ ಕಡಿಮೆಯಾಗಬಹುದು.