24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!