37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

ಧರ್ಮಸ್ಥಳ: 2022-23ರ ಸಾಲಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 6374 ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರದಿಂದ ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಯಿತು.

ರಾಜ್ಯದಲ್ಲಿ ಸುಮಾರು 13.24 ಲಕ್ಷ ವಿಶೇಷ ಚೇತನರಿದ್ದಾರೆಯೆಂಬ ಮಾಹಿತಿಯಿದೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್ ಅಪಘಾತಗಳು, ಮಾರಕರೋಗಗಳಿಂದ ಬರುತ್ತವೆ. ಗಂಭೀರ ಸಮಸ್ಯೆಯಿರುವ ವಿಶೇಷ ಚೇತನರ ಪಾಲನೆ ಪೋಷಣೆ, ಅತ್ಯಂತ ಕಷ್ಟಕರವಾದುದು. ಇವರ ಯೋಗಕ್ಷೇಮ ನೋಡುವುದಕ್ಕಾಗಿಯೇ ಮನೆಯಲ್ಲಿ ಒಂದೆರಡು ಮಂದಿ ಇರಬೇಕಾಗಿದೆ. ಮುಖ್ಯವಾಗಿ ಸ್ನಾನ, ಶೌಚ ಊಟೋಪಚಾರಗಳನ್ನು ಸ್ವಯಂ ಮಾಡಿಕೊಳ್ಳಲು ಸಾಧ್ಯವಾಗದ, ಎಷ್ಟೋ ಮಂದಿ ಇತರರ ಅವಲಂಬನೆಯಲ್ಲಿ ಬದುಕಬೇಕಿದೆ. ಮನೆಯಿಂದ ಹೊರಹೋಗಲಾರದೆ, ಮಲಗಿದಲ್ಲೇ ಇರುವ ವಿಶೇಷ ಚೇತನರ ಬದುಕಂತೂ ಅತ್ಯಂತ ಶೋಚನೀಯವಾಗಿರುತ್ತದೆ. ನಿತ್ಯ ಕೂಲಿ ಮಾಡಿ ಬದುಕುವ ಎಷ್ಟೋ ಕುಟುಂಬಗಳು ಇದರಿಂದಾಗಿ ಆರ್ಥಿಕ ಸಂಕಷ್ಟವನ್ನೆದುರಿಸುವುದಲ್ಲದೇ ಮಾನಸಿಕವಾಗಿಯೂ ನೊಂದಿರುತ್ತಾರೆ. ಇದನ್ನರಿತ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಇವರಿಗಾಗಿಯೇ ವಿವಿಧ ಉಚಿತ ಸಲಕರಣೆಗಳನ್ನು ನೀಡುವ ಜನಮಂಗಲ ಕಾರ್ಯಕ್ರಮ ಜಾರಿಗೆ ತಂದರು.

ಜನಮಂಗಲ ಕಾರ್ಯಕ್ರಮದಂತೆ ಹಾಸಿಗೆ ಹಿಡಿದು ಮಲಗಿದಲ್ಲಿಯೇ ಇದ್ದವರಿಗೆ ಹುಣ್ಣು (ಬೆಡ್ ಸೋರ್) ಆಗದಂತೆ ನೀರಹಾಸಿಗೆ (ವಾಟರ್ ಬೆಡ್), ಅಪಘಾತಕ್ಕೊಳಗಾಗಿ ನಡೆದಾಡಲು ಸಾಧ್ಯವಿಲ್ಲದವರಿಗೆ ಓಡಾಡಲು ಗಾಲಿಕುರ್ಚಿ (ವೀಲ್ ಚಯರ್), ಏಕಕಾಲಿನ ಕೈಗೋಲು (ಸಿಂಗಲ್ ಲೆಗ್ ವಾಕಿಂಗ್ ಸ್ಟಿಕ್), ಮೂರುಕಾಲಿನ ಕೈಗೋಲು (ತ್ರಿ ಲೆಗ್ ವಾಕಿಂಗ್ ಸ್ಟಿಕ್), ಹಾಸಿಗೆ ಹಿಡಿದ ರೋಗಿಗಳಿಗೆ ಸ್ನಾನಕ್ಕೆ, ಶೌಚಕ್ಕೆ ಹೋಗಲು ಗಾಲಿಕುರ್ಚಿ (ಕಮೋಡ್ ವೀಲ್ ಚಯರ್), ಅಪಘಾತಕ್ಕೊಳಗಾದವರಿಗೆ ಊರುಗೋಲು (ಆಕ್ಸಿಲರಿ ಕ್ರಚಸ್), ಸ್ಟ್ರೋಕ್ (ಪ್ಯಾರಾಲಿಸಿಸ್)ಗೆ ತುತ್ತಾದವರಿಗೆ ನಡುಗೋಲು ವಿತರಿಸಲಾಯಿತು.

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!