ಇಳಂತಿಲ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಿಕಾ ಭಟ್ ರವರ ಅಧ್ಯಕ್ಷತೆಯಲ್ಲಿ ಜೂ.15ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ನಿರ್ದೇಶಕ ಜೊಸೆಫ್ ಭಾಗವಹಿಸಿದ್ದರು..

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯವರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.
ಪಂಚಾಯತ್ ಉಪಾಧ್ಯಕ್ಷ ಸುಪ್ರೀತ್., ಸದಸ್ಯರಾದ ಉಷಾ ಯು. ವಿಜಯಕುಮಾರ್, ಸಿದ್ದಿಕ್, ರೇಖಾ, ವಸಂತ ಕುಮಾರ್, ತಿಮ್ಮಪ್ಪಗೌಡ, ರಮೇಶ, ಜಾನಕಿ, ನುಸ್ರತ್, ಗ್ರಾ.ಪಂ ಕಾರ್ಯದರ್ಶಿ ಕಿರಣ್ ಎಂ. ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಲೆಕ್ಕ ಪತ್ರ ಮಂಡಿಸಿದರು.
