April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

ಕಲ್ಮಂಜ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು.

ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಅಗತ್ಯ ಸ್ಥಳಗಳಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು.

ಇಲ್ಲಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಚರಂಡಿಯ ಮೋರಿಗಳು ಬ್ಲಾಕ್ ಆಗಿ ಮಳೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿತ್ತು.ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಾಥಮಿಕ ಕೆಲಸಗಳನ್ನು ನಡೆಸಿದರೆ ರಸ್ತೆಯಲ್ಲಿ ಮಳೆ ನೀರು ಹರಿಯುವ ಪ್ರಮಾಣ ಕಡಿಮೆಯಾಗಬಹುದು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!