23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಜೆಸಿ ಬಂದುಗಳಿಗೆ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಸಭೆ ಮತ್ತು ಪಾಲ್ಗೊಂಡ ಜೆಸಿ ಸದಸ್ಯರಿಗೆ ಮತ್ತು ಜೂನಿಯರ್ ಜೆಸಿ ಸದಸ್ಯರಿಗೆ ಗೌರವಿಸಲಾಯಿತು.

ಘಟಕದ ಪೂರ್ವಧ್ಯಕ್ಷರುಗಳು ಮತ್ತು ಸದಸ್ಯರುಗಳು ಘಟಕದ ಈ ವರೆಗಿನ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಸಮ್ಮೇಳನ ಸಂಯೋಜಕರಾದ ಶೈಲೇಶ್, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಚಂದ್ರಹಾಸ್ ಬಳಂಜ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಅನುದೀಪ್ ಜೈನ್ ಜೆಸಿವಾಣಿ ವಾಚಿಸಿದರು, ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

Related posts

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!