ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.
“ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ನಿರ್ಧಾರಿಸಲಾಗಿದೆ.
ಸಂಪುಟದ ೀ ತೀರ್ಮಾನ ಆಧರಿಸಿ ಸುತ್ತೋಲೆ ಹೊರಡಿಸಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಸರಕಾರಿ ಮತ್ತು ಅರೆ ಸರಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯ ಫೋಟೊ ಹಾಕುವುದನ್ನೂ ಕಡ್ಡಾಯ ಮಾಡಲಾಗಿದೆ.