ಉಜಿರೆ: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು.
ಅವರು ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ, ಕಾಲೇಜಿನ ಕಲಾ ನಿಕಾಯದ ಡೀನ್ ಡಾ. ಶಲೀಪ್ ಕುಮಾರಿ ಸ್ಪರ್ಧೆಗಳ ಟ್ರೋಫಿಗಳನ್ನು ಅನಾವರಣಗೊಳಿಸಿದರು. ಕಾಲೇಜಿನ ಕುಲಸಚಿವ (ಆಡಳಿತ) ಪ್ರೊ. ಎಸ್.ಎನ್. ಕಾಕತ್ಕರ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗಣರಾಜ ಕೆ., ಪ್ರಾಧ್ಯಾಪಕರಾದ ಡಾ. ನಾಗರಾಜ ಪೂಜಾರಿ ಹಾಗೂ ಅಭಿನಂದನ್ ಜೈನ್, ವಿದ್ಯಾರ್ಥಿ ಪ್ರತಿನಿಧಿಗಳಾದ ಅಭಿಲಾಷ್ ಹಾಗೂ ಹಿಮಾಂಶಿ, ಇತರ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮನೋಜ್ ವಂದಿಸಿ, ಅನ್ನಪೂರ್ಣ ನಿರೂಪಿಸಿದರು.