September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya
error: Content is protected !!