September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

ಬೆಳ್ತಂಗಡಿ: ಸರಕಾರಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದ ಜಿಲ್ಲಾ ಆರೋಗ್ಯಾಧಿಕಾರಿಗಳು‌ ಜೂ.17 ರಂದು ಮಾಜಿ ಶಾಸಕ ವಸಂತ ಬಂಗೇರ ಜೊತೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು ಇದಕ್ಕೆ ತಕ್ಷಣ ಪರಿಹಾರ ಮಾಡುವಂತೆ ವಸಂತ ಬಂಗೇರ ಡಿ.ಎಚ್.ಓ ಅವರಿಗೆ ತಿಳಿಸಿದರು.

ಮಾಧ್ಯಮದವರ ಜೊತೆ ಮಾತಾಡಿದ ಡಿ.ಎಚ್.ಒ ಡಾ. ಕಿಶೋರ್ ಕುಮಾರ್, ಈಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಪರಿಶೀಲನೆ ಮಾಡಲಾಗಿದೆ ಎಲ್ಲಾ ಕೊರತೆಗಳನ್ನು ಬಗೆಹರಿಸುವಲ್ಲಿ ಪ್ರಯತ್ನಿಸಿದ್ದೇವೆ ಎಂದರು.


ಈ ವೇಳೆ ತಾಲೂಕಿನ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ರಂಜನ್ ಗೌಡ, ಶೈಲೇಶ್ ಕುಮಾರ್, ಕಾರ್ಮಿಕ ಮುಖಂಡ ಬಿ.ಎಮ್ ಭಟ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!