24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಜೂ .17 ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ವಹಿಸಿಕೊಂಡಿದ್ದರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುದುವೆಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಯಶವಂತ ಗೌಡರವರು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತರು ಶಾಲಾ ಹಂತದಲ್ಲಿ ಮಂತ್ರಿಮಂಡಲದ ರಚನೆಯು ಮಗುವಿನ ಮುಂದಿನ ಭವಿಷ್ಯದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ದೇಶದಲ್ಲಿ ಹೇಗೆ ತನ್ನ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವ ಕಲ್ಪನೆ ಮಕ್ಕಳಿಗೆ ತಿಳಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು, ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ದಿನಗಳಲ್ಲಿ ನಡೆದಂತಹ ಶಾಲಾ ಹಂತದ ಮಂತ್ರಿಮಂಡಲದ ರಚನೆಯನ್ನು ಈ ಸಂದರ್ಭದಲ್ಲಿ ಮೆಲುಕು ಹಾಕಿದರು.

ಶಾಲೆಯ ಶಿಕ್ಷಕರಾದ ನಿಶಾಂತ್ ಕುಮಾರ್ ರವರು ನೂತನವಾಗಿ ಆಯ್ಕೆಗೊಂಡ ಎಲ್ಲ ಮಂತ್ರಿಗಳು ಶಾಲೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ತಿಳಿಸಿದರು. ನೂತನವಾಗಿ ಆಯ್ಕೆಗೊಂಡಂತಹ ಮಂತ್ರಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರಾದಂತಹ ಶ್ರೀಯುತ ಶೀನಪ್ಪಗೌಡರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತರು ಮಕ್ಕಳು ತಮ್ಮ ತಮ್ಮ ಖಾತೆಗಳಿಗೆ ಅನುಗುಣವಾಗಿ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ಮಾಡಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ತಿಳಿಸಿದರು . ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶ್ರೀಮತಿ ಶೀಲಾ ಎನ್ ರವರು ಸ್ವಾಗತಿಸಿ, ಶ್ರೀಮತಿ ತೇಜಾವತಿಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಪವನ್ ಕುಮಾರ್ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!