September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!