24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ಸಂದರ್ಭದಲ್ಲಿ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರು ನಿಂತು ಪಾದಾಚಾರಿಗಳಿಗೆ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಸೇತುವೆ ಮೇಲೆ ನಡೆದುಕೊಂಡು ಹೋಗಲು ಬಹಳ ಕಷ್ಟಕರವಾಗದನ್ನು ಅರಿತ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಇವರ ಸೂಚನೆ ಯೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 539 ನೆಯ ಸೇವಾ ಯೋಜನೆಯ ಶ್ರಮದಾನದ ಮೂಲಕ ಸಂಗ್ರಹವಾದ ಮಣ್ಣು ಹಾಗೂ ಮರಳುಗಳನ್ನು ತೆರವುಗೊಳಿಸಿ ಸೇತುವೆಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸೇತುವೆಯಲ್ಲಿ ಸಂಚರಿಸಿದ ಪಾದಾಚಾರಿಗಳು ಹಾಗೂ ವಾಹನ ಸವಾರರು ಸಂಘಟನೆ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನಿಮ್ಮ ಈ ಸಮಾಜ ಸೇವೆಯ ಕಾರ್ಯಗಳು ಇನ್ನಷ್ಟು ನಿರಂತರವಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ, ರಾಘವೇಂದ್ರ, ರಾಜ ಕೇಸರಿ ಸಂಘಟನೆ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆ ಸದಸ್ಯರುಗಳಾದ ಶಶಿಕಾಂತ್ , ರಾಮಣ್ಣ, ಗಣೇಶ್, ಕಿರಣ್, ಗಣೇಶ್, ಅಭಿಷೇಕ್, ಹರೀಶ್, ಕಿಶನ್, ಭರತ್, ಗಣೇಶ್ (ರಿಕ್ಷಾ), ಇವರೆಲ್ಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!