ಉಜಿರೆ: ಉಜಿರೆಯ ಹಿರಿಯರೂ ,ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಕೀರ್ತಿಶೇಷ ವಿಜಯ ರಾಘವ ಪಡುವೆಟ್ನಾಯರು ಹಾಕಿಕೊಟ್ಟ ಸನ್ಮಾರ್ಗದಂತೆ ಹಾಗೂ ಪ್ರತಿ ವರ್ಷದ ಆಚರಣೆಯಂತೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಮತ್ತು ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ವತಿಯಿಂದ ಈ ವರ್ಷವೂ ಆಷಾಢ ಪ್ರಥಮೈಕಾದಶೀ ಪ್ರಯುಕ್ತ ಜೂ 29 ರಂದು ಗುರುವಾರ ಬೆಳಿಗ್ಗೆ 7.30ಕ್ಕೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಪರಮ ಪೂಜ್ಯ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ ” ತಪ್ತಮುದ್ರಾ ಧಾರಣೆ” ಕಾರ್ಯಕ್ರಮ ಜರಗಲಿದೆ.
ಆಸಕ್ತ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪ್ತ ಮುದ್ರಾಧಾರಣೆಯಲ್ಲಿ ಪಾಲ್ಗೊಂಡು ಶ್ರೀ ಭಗವ೦ತಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ಮತ್ತು ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.