ಉಜಿರೆ: ಕೇವಲ ಅಂಕಗಳಿಂದ ಆದಾಯ ಬರುವುದಿಲ್ಲ ಜೊತೆಗೆ ಜೀವನ ಕೌಶಲ್ಯವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಅದು ಸ್ವ ಉದ್ಯೋಗ ಇರಬಹುದು ಅಥವಾ ಯಾವುದೇ ಇತರ ಉದ್ಯೋಗವಿರಬಹುದು, ವಿದ್ಯಾರ್ಥಿನಿಯರು ಹಣದ ಉಳಿತಾಯ ಮಾಡಿದರೆ ಮಾಡಿದರೆ ಮಾತ್ರ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ನಿರ್ವಹಣೆ ಮಾಡಬಹುದು ಅದಕ್ಕಾಗಿ ಹಣವನ್ನು ಯಾವ ಯಾವ ರೀತಿಯಲ್ಲಿ ಉಳಿತಾಯ ಮಾಡಬೇಕು ಹಣವನ್ನು ಹೇಗೆ, ಎಲ್ಲಿ, ಯಾವಾಗೆಲ್ಲಾ ಉಳಿತಾಯ ಮಾಡಬೇಕು ಮುಂತಾದ ಹಲವಾರು ವಿಷಯಗಳ ಕುರಿತು ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಚಾಲಕರಾದ ಶ್ರೀಮತಿ ಉಷಾ ನಾಯಕ್ ಇವರು ಜೂ. 16 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ನಡೆದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶವು ಆರ್ಥಿಕವಾಗಿ ಸದೃಢವಾಗಿ ಬೆಳೆಯಲು ಪ್ರತಿಯೊಬ್ಬ ಪ್ರಜೆಯೂ ದುಡಿಯುವವರಾಗಬೇಕು, ಹಾಗೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯ ನೀಡುವುದಾಗಿ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು. ಜೊತೆಗೆ ವಿಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಮುದ್ರಾ ಯೋಜನೆ, ಆರ್ ಡಿ ಹಾಗೂ ಅಟಲ್ ಪೆನ್ಷನ್ ಯೋಜನೆ ಮುಂತಾದ ಹಲವಾರು ವಿಷಯಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು ಬೋಧಕ ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿರು.