ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

ಉಜಿರೆ: ಕೇವಲ ಅಂಕಗಳಿಂದ ಆದಾಯ ಬರುವುದಿಲ್ಲ ಜೊತೆಗೆ ಜೀವನ ಕೌಶಲ್ಯವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಅದು ಸ್ವ ಉದ್ಯೋಗ ಇರಬಹುದು ಅಥವಾ ಯಾವುದೇ ಇತರ ಉದ್ಯೋಗವಿರಬಹುದು, ವಿದ್ಯಾರ್ಥಿನಿಯರು ಹಣದ ಉಳಿತಾಯ ಮಾಡಿದರೆ ಮಾಡಿದರೆ ಮಾತ್ರ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ನಿರ್ವಹಣೆ ಮಾಡಬಹುದು ಅದಕ್ಕಾಗಿ ಹಣವನ್ನು ಯಾವ ಯಾವ ರೀತಿಯಲ್ಲಿ ಉಳಿತಾಯ ಮಾಡಬೇಕು ಹಣವನ್ನು ಹೇಗೆ, ಎಲ್ಲಿ, ಯಾವಾಗೆಲ್ಲಾ ಉಳಿತಾಯ ಮಾಡಬೇಕು ಮುಂತಾದ ಹಲವಾರು ವಿಷಯಗಳ ಕುರಿತು ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಚಾಲಕರಾದ ಶ್ರೀಮತಿ ಉಷಾ ನಾಯಕ್ ಇವರು ಜೂ. 16 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ನಡೆದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶವು ಆರ್ಥಿಕವಾಗಿ ಸದೃಢವಾಗಿ ಬೆಳೆಯಲು ಪ್ರತಿಯೊಬ್ಬ ಪ್ರಜೆಯೂ ದುಡಿಯುವವರಾಗಬೇಕು, ಹಾಗೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯ ನೀಡುವುದಾಗಿ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು. ಜೊತೆಗೆ ವಿಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಮುದ್ರಾ ಯೋಜನೆ, ಆರ್ ಡಿ ಹಾಗೂ ಅಟಲ್ ಪೆನ್ಷನ್ ಯೋಜನೆ ಮುಂತಾದ ಹಲವಾರು ವಿಷಯಗಳ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು ಬೋಧಕ ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿರು.

Related posts

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!