September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ 2023-24ನೇ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನೆ ನೆರವೇರಿತು. ವಿದ್ಯಾರ್ಥಿನಿಯರ ಯಕ್ಷಗಾನ ನೃತ್ಯ ದ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತವನ್ನು ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದ ಧರ್ಮಸ್ಥಳ ಕೃಪಾಪೋಷಿತ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಮಾತನಾಡಿ ಯಕ್ಷಗಾನ ಒಂದು ಪರಿಪೂರ್ಣ ಕಲೆ. ಇದು ಒಂದು ಆಶು ಸಾಹಿತ್ಯ, ಅಶುಪ್ರದರ್ಶನವಾಗಿದೆ. ಯಕ್ಷಗಾನ ಕಲಾವಿದರು ಎಲ್ಲಾ ಪತ್ರಗಳನ್ನು ನಿರ್ವಹಿಸಲು ತಯಾರಿಯಾಗಿರುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಯಕ್ಷಗಾನವನ್ನು ಕಲಿತರೆ ಮುಂದಿನ ಪೀಳಿಗೆಗೆ ಮುಂದುವರೆಸಿಕೊಂಡು ಹೋಗಬಹುದು ಎಂದು ಹೇಳಿದರು.

ಯಕ್ಷಗಾನ ತರಬೇತುದಾರ ಲಕ್ಷ್ಮಣ ಬೆಳಾಲು ಇವರು ಯಕ್ಷಗಾನ ಕಲೆ ನಿತ್ಯ ವಿನೂತನ. ಕಲಾವಿದನಾದವನು ತನ್ನ ಯಾವ ನೋವುಗಳಿದ್ದರೂ ಪ್ರೇಕ್ಷಕರನ್ನು ಅದ್ಭುತ ಲೋಕಕ್ಕೆ ಕರೆದುಕೊಂಡು ಹೋಗುವ ಕಲಾವಿದನಾಗಿರುತ್ತಾನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ . ಪಿ. ಸುಬ್ರಮಣ್ಯ ರಾವ್ ಮಾತನಾಡಿ ಯಕ್ಷಗಾನ ಕಲಿಯುವುದರಿಂದ ಭಾಷಾ ಸ್ಪಷ್ಟತೆ ಹೆಚ್ಚುತ್ತದೆ. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಯುತ್ತದೆ ಇದರಿಂದ ಮಕ್ಕಳು ಎಳವೆಯಲ್ಲಿಯೇ ಯಕ್ಷಗಾನ ಕಲಿಯಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕುಮಾರಿ ಚಿನ್ಮಯಿ ನಿರೂಪಿಸಿದ ಕಾರ್ಯಕ್ರಮವನ್ನು ಕುಮಾರಿ ಕು| ಸುಮಿತ ವಂದಿಸಿದರು.

Related posts

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
error: Content is protected !!