April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಕಳಿಯ: ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ಜೂ.21 ರಂದು ಕಳಿಯ ಸರಕಾರಿ ಸಭಾಭವನ ಗೇರುಕಟ್ಟೆಯಲ್ಲಿ ನಡೆಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೋದಾಮು ಕಟ್ಟಡ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ವಸಂತ ಮಜಲು ಮತ್ತು ಡಾ. ಎಂ.ಎನ್. ರಾಜೇಂದ್ರ ಕುಮಾರ್ ದೀಪ ಪ್ರಜ್ವಲನೆ ಮಾಡಿದರು.

ಗೌರವ ಉಪಸ್ಥಿತಿಯಲ್ಲಿ ಪುತ್ತೂರು ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ, ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಉಜಿರೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾಣ್ಯಪ್ಪ ಪೂಜಾರಿ ಕಲ್ಲಾಪು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತ್ಯಶಂಕರ ಕೆ.ಜಿ., ನಿರ್ದೇಶಕರುಗಳಾದ ರಾಜ್ ಪ್ರಕಾಶ್ ಶೆಟ್ಟಿ, ದೇವಣ್ಣ ಮೂಲ್ಯ, ಎಂ. ಹರಿದಾಸ ಪಡಂತ್ತಾಯ, ರಾಜೀವ ಗೌಡ, ನೋಣಯ್ಯ, ರತ್ನಾಕರ, ಶಶಿಧರ ಶೆಟ್ಟಿ, ಶೇಖರ ನಾಯ್ಕ, ಚಂದ್ರಾವತಿ, ಮಮತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!