37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

ಬೆಳ್ತಂಗಡಿ: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ.21 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣವನ್ನು ಗೈದು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!