25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಆಚರಿಸಲಾಯಿತು.

ಕ್ಷೇತ್ರ ದ ಅಮೃತ ವರ್ಷಿಣಿ ಸಭಾಭವನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದರು.

ಉಜಿರೆಯ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯರಾದ ಕುಮಾರಿ ದಿಶಾ ಪೂಜಾರಿ ಮತ್ತು ತಂಡ ಯೋಗ ತರಬೇತಿ ನೀಡಿದರು. ಶಿಕ್ಷಕಿ ಪೂರ್ಣಿಮಾ ಜೋಷಿ ಸ್ವಾಗತಿಸಿ ವಂದಿಸಿದರು.

ತರಬೇತಿ ನೀಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಕರಾದ ಸಂಜೀವ ಕೆ ಇವರು ಮುಖ್ಯ ಶಿಕ್ಷಕರಾದ ಸುಬ್ರಮಣ್ಯ ರಾವ್ ಇವರ ಮಾರ್ಗದರ್ಶನದಂತೆ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya
error: Content is protected !!