24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸುಮತಿ ಹೆಗ್ಡೆಯವರು ಅಳದಂಗಡಿಯ ನಿವಾಸಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಲೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ , ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!