ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂಧಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸುಮತಿ ಹೆಗ್ಡೆಯವರು ಅಳದಂಗಡಿಯ ನಿವಾಸಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಲೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ , ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Related posts

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya
error: Content is protected !!