30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದರ ಸಭಾಭವನದಲ್ಲಿ ಜೂ 22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿಯ ವಿರೂಪಾಕ್ಷಪ್ಪ ಅವರು ನಡೆಸಿಕೊಟ್ಟರು.

ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌.ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಲಾಯಿತು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ರಾಜೇಶ್ ಕೆ, ಸೂರಜ್ ವಳಂಬ್ರ, ಗುರುಪ್ರಸಾದ್, ರತ್ನಾವತಿ, ಸಾವಿತ್ರಿ, ನಳಿನಿ, ಲಾವಣ್ಯ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ ಸ್ವಾಗತಿಸಿದರು. ಸಭೆಯಲ್ಲಿ ಕಾರ್ಯದರ್ಶಿ ಜನಾರ್ಧನ ಗೌಡ, ಗ್ರಾಮಸ್ಥರು, ಆರೋಗ್ಯ ಸಹಾಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!