April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಗ್ರಾಮದ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ., ಕಾರ್ಯದರ್ಶಿ ಯೋಗಿಣಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಇಲಾಖಾ ಅಧಿಕಾರಿ, ಸಿಬಂದಿ ವರ್ಗ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸಿಬ್ಬಂದಿ ಸತೀಶ್ ಕೆ ಕುತ್ಲೂರು ಕಳೆದ ಗ್ರಾಮ ಸಭೆಯ ಕಾರ್ಯಪಾಲನಾ ವರದಿ ಸಭೆಗೆ ಮಂಡಿಸಿದರು. ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
error: Content is protected !!