April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ.

ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ.

ದಾಸ್ ರವರ ಮಗ ನರೇಂದ್ರ ಮತ್ತು ಅಣ್ಣನ ಮಗ ರೋಹಿತ್ ಅವರು ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯ ನಲ್ಲಿದ್ದು ಅದಿರಾ ನೀರುಮಾರ್ಗದ ಮಂಗಳಾ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತಿದ್ದರು. ಜೂ 18 ರಂದು ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ.

ಅದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಅದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

Related posts

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!