September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಉಜಿರೆ : “ಸಂಸ್ಕೃತಿ, ಸಂಸ್ಕಾರ, ಜೀವನ ಮೌಲ್ಯ, ಕೌಶಲದ ಅಭಿವೃದ್ಧಿಗೆ ಯಕ್ಷಗಾನದ ಪಾತ್ರ ಮಹತ್ವವಿದೆ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ ಹೇಳಿದರು.ಇ

ವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜೂ.23 ರಂದು ನಡೆದ ‘ಯಕ್ಷಗಾನ ತರಬೇತಿ’ ತರಗತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.”ಬುದ್ಧಿಯನ್ನು ತಿದ್ದುವ ಕಲೆ ಹಾಗೂ ಸಂಸ್ಕಾರವನ್ನು ಬೆಳೆಸುವ ಕಲೆಯಾಗಿದೆ” ಎಂದು ಯಕ್ಷಗಾನ ನಾಟ್ಯಗುರುಗಳಾದ ಲಕ್ಷ್ಮಣ ಗೌಡ ಇವರು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಶಿಕ್ಷಕರಾದ ಮನಮೋಹನ್ ನಾಯಕ್ ಅಧ್ಯಕ್ಷೀಯ ನುಡಿಗಳನ್ನಾಡಿದರು.

ವೇದಿಕೆಯಲ್ಲಿ ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಮುಖ್ಯ ಶಿಕ್ಷಕಿ ಪರಿಮಳ ಇವರು ಉಪಸ್ಥಿತರಿದ್ದರು. ಯಕ್ಷಗಾನ ತರಬೇತಿ ತರಗತಿಯ ಸಂಯೋಜಕರಾದ ಶಿಕ್ಷಕ ಕಿರಣ್ ರಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya
error: Content is protected !!