September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಬದುಕಿನಲ್ಲಿ ಸಿಕ್ಕಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಿ, ಫ್ಯಾಷನ್ ಯುಗದಲ್ಲಿ ಹೊಸತನಕ್ಕೆ ಉತ್ತಮ ಅವಕಾಶ ಇದೆ, ನಿಮ್ಮ ಕೆಲಸದಲ್ಲಿ ಹೊಸತನಕ್ಕೆ ಹೆಚ್ಚು ಆದ್ಯತೆ ಇರಲಿ, ಗ್ರಾಹಕರು ಅಪೇಕ್ಷೆಗೆ ಅನುಗುಣವಾಗಿ ಕೆಲಸ ಮಾಡಿ ಕೊಡುವಂತಹ ಪ್ರಯತ್ನ ಮಾಡಿ, ಸಾದನೆಯ ಮೂಲಕ ನಿಮ್ಮನ್ನು ಗುರುತಿಸಿಕೊಳ್ಳಿ, ರುಡ್‌ಸೆಟ್ ಸಂಸ್ಥೆಯು ಏನೂ ಪ್ರತಿಫಲ ಅಪೇಕ್ಷೆ ಇಲ್ಲದೆ, ಯುವ ಯುವ ಜನತೆಯು ಆರ್ಥಿಕ ಸಬಲರಾಗುವ ಉದ್ದೇಶದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಈ ಸಂಸ್ಥೆಯಲ್ಲಿ ಪಡೆದ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಿ ಎಂದು ಧೀಮತಿ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಸೋನಿಯಾವರ್ಮ ರವರು ಅಭಿಪ್ರಾಯ ಪಟ್ಟರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಆಧುನಿಕ ಯುಗದಲ್ಲಿ ಎಂಬ್ರಾಯ್ಡರಿ ಹೆಚ್ಚು ಬೇಡಿಕೆ ಇರುವಂತಹ ಉದ್ಯೋಗ ಕ್ಷೇತ್ರವಾಗಿದ್ದು, ಮಹಿಳೆಯರು ಮನೆಯಲ್ಲೇ ಸ್ವ ಉದ್ಯೋಗ ಪ್ರಾರಂಭಿಸಿ, ಉತ್ತಮ ಆದಾಯ ಗಳಿಸಲು ಅವಕಾಶ ಇದೆ. ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್ ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯರವರು ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಧನ್ಯವಾದವಿತ್ತರು.

ಕೆಲವು ಶಿಭಿರಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು. 35 ಜನ ಶಿಬಿರಾರ್ಥಿಗಳು 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!