32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ವತಿಯಿಂದ ಕೊಡಮಾಡುವ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜೂ.22 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ರವರು ಪ್ರಾಥಮಿಕ ಶಾಲಾ ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಆ ಮಗು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರಲು ಸಾಧ್ಯವಿದೆ ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಎಷ್ಟು ಮುಖ್ಯವೊ ಅಷ್ಟೇ ಆ ಮಗುವಿಗೆ ಮನೆಯಲ್ಲಿ ಮಾರ್ಗದರ್ಶನ ಸಿಗುವಂತಾಗಬೇಕು, ಮಕ್ಕಳು ಪ್ರಶ್ನಿಸುವ ಮನೋಭಾವ ಇಟ್ಟುಕೊಂಡಾಗ ಮಾತ್ರ ಮಗುವಿನಲ್ಲಿ ನಾಯಕತ್ವದ ಗುಣ ಬೆಳೆಯಲು ಸಾಧ್ಯ, ಆಡಳಿತ ಮಂಡಳಿಯು ಈ ಶಾಲೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ್ ಮಾತನಾಡಿ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವಂತೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಿ ಪ್ರೋತ್ಸಾಹಿಸುತ್ತಿರುವುದು ಅಭಿನಂದನೆಯ ಎಂದು ಅಭಿಪ್ರಾಯಪಟ್ಟರು.

ನಂತರ ಕ್ಷೇತ್ರದ ವತಿಯಿಂದ ನೀಡಲ್ಪಡುವ ಉಚಿತ ಬರವಣಿಗೆ ಪುಸ್ತಕಗಳನ್ನು ಕ್ಷೇತ್ರದ ಪ್ರತಿನಿಧಿಯಾಗಿ ಆಗಮಿಸಿ ದಿವ್ಯ ಹಸ್ತದಿಂದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದರು.

ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಕ್ಷೇತ್ರದ ವತಿಯಿಂದ ಕೊಡಮಾಡುವ ಉಚಿತ ಬರವಣಿಗೆ ಪುಸ್ತಕಗಳನ್ನು ಎಲ್ಲ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಉಜಿರೆಯ ಪರ್ಚೇಸ್ ಆಫೀಸರ್ ಶೈಲೇಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್, ಸೀನಪ್ಪ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕ ಪವನ್‍ ಕುಮಾರ್ ಸ್ವಾಗತಿಸಿ, ಶಾಲಾ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶಿಕ್ಷಕನಿಶಾಂತ್ ಕುಮಾರ್ ರವರು ನಿರೂಪಿಸಿದರು.

ಕಾರ್ಯಕ್ರಮಕ್ಕೆ ಪೋಷಕ ವೃಂದದವರು, ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!