ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ಶ್ರಾವಕರ ಸಮಾಲೋಚನಾ ಸಭೆ ಜೂ.24 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಾಮಸ್ತಕಾಭಿಷೇಕದ ದಿನಾಂಕವನ್ನು ಘೋಷಣೆ ಮಾಡಿದರು.
2024 ರ ಫೆಬ್ರವರಿ 22 ರಿಂದ ಮಾರ್ಚ್ 1 ರ ತನಕ ವೇಣೂರು ಬಾಹುಬಲಿಗೆ ಮಹಾಮಜ್ಜನ ನಡೆಯಲಿದೆ. ಸಮಿತಿಯಲ್ಲಿ ಯುವಕರು ಹೆಚ್ಚಾಗಿ ಬರುಬೇಕು, 27 ಸಮಿತಿಗಳನ್ನು ರಚಿಸಲಾಗಿದ್ದು ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮೂಡಿಬರಲಿದೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು, ಸಮಿತಿ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್ , ಎಂ.ಕೆ.ವಿಜಯ ಕುಮಾರ್, ಸಮಿತಿಯ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಇಂದ್ರ, ಇನ್ನಿತರ ಗಣ್ಯರು , ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.