April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯು ಜೂನ್ 26ರಂದು ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.

ನಾಟ್ಯ ತರಬೇತಿ ಗುರುಗಳಾಗಿ ಧರ್ಮಸ್ಥಳ ಮೇಳದಲ್ಲಿ ಅನೇಕ ವರ್ಷಗಳ ಕಾಲ ಕಲಾವಿದನಾಗಿ ಸೇವೆಗೈದ ಈಶ್ವರ ಪ್ರಸಾದ್ ಸಹಕರಿಸಲಿದ್ದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶಿಕ್ಷಣದೊಂದಿಗೆ ಕಲೆಯ ಆಸಕ್ತಿಯೂ ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ಶರತ್ ತುಳುಪುಳೆ ಇವರು ಯಕ್ಷ ಶೈಲಿಯಲ್ಲಿ ಪ್ರಾರ್ಥಿಸಿ, ಶ್ರೀಮತಿ ಶೋಲಿ ಇವರು ಸ್ವಾಗತಿಸಿ, ಶ್ರೀಮತಿ ಸುಚಿತ್ರ ರವರು ವಂದಿಸಿದ ಈ ಕಾರ್ಯಕ್ರಮವನ್ನು ವಿನಾಯಕ ಜೋಶಿ ನಿರ್ವಹಿಸಿದರು.

Related posts

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya
error: Content is protected !!