26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪೋಷಕರು,
ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ಜೂ.26 ರಂದು ಶ್ರಮದಾನದ ಮೂಲಕ ನಡೆಸಿಕೊಟ್ಟರು.

ಶ್ರಮದಾನದಲ್ಲಿ ಶಾಲಾ ಆವರಣದ ಬೇಲಿ ದುರಸ್ತಿ, ಆಟದ ಮೈದಾನದ ಸುತ್ತಲಿನ ಚರಂಡಿ ನಿರ್ವಹಣೆ, ಶಾಲೆಯ ಅಡಿಕೆ ಗಿಡದ ತೋಟಕ್ಕೆ ಸೊಪ್ಪು ಹಾಕುವುದು ಮತ್ತಿತರ ಕೆಲಸಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ ಪೊಯ್ಯೋಲೆ ಅವರು ಮಾತನಾಡಿ ಎಲ್ಲಾ ಪೋಷಕರು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಶ್ರಮದಾನದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮಂಜನಾಯ್ಕ ಸಿ. ಮತ್ತು ಶಿಕ್ಷಕ ವೃಂದ ಭಾಗಿಯಾದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!