37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಔಷಧಿ ವ್ಯಾಪಾರಿಗಳ ಜಾಥವು ಜೂ.26 ರಂದು ನಡೆಯಿತು.

ನಂತರ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ.ಆಂಟೋನಿ ಟಿ.ಪಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಉಪ ಔಷಧ ನಿಯಂತ್ರಕ ಸುಜಿತ್ ಟಿ.ಪಿ, ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್, ಬಾಬು ಬಿ.ಎನ್, ಉಪಾಧ್ಯಕ್ಷ ಉದಯ್ ಕುಮಾರ್ ಮಡಂತ್ಯಾರು ಮಹಾವೀರ ಮೆಡಿಕಲ್, ಕಾರ್ಯದರ್ಶಿ ಮಾಧವ ಬೆಳ್ತಂಗಡಿ ಗಣೇಶ್ ಮೆಡಿಕಲ್, ಕೋಶಾಧಿಕಾರಿ ಗಣಪತಿ ಭಟ್ ಅಮರ್ ಡ್ರಗ್ ಹೌಸ್ ಬೆಳ್ತಂಗಡಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು, ಔಷಧಿ ವ್ಯಾಪಾರಸ್ಥರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅಶ್ವಿನಿ ಪ್ರಾರ್ಥಿಸಿದರು. ಸುಜಿತ್ ಭಿಡೆ ಸ್ವಾಗತಿಸಿ, ಪ್ರಕಾಶ್ ನಿರೂಪಿಸಿದರು.

Related posts

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!