24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

ಬೆಳ್ತಂಗಡಿ: ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರಿಗೆ ಸೂಕ್ಷ, ಇಲೆಕ್ಟ್ರೋನಿಕ್ಸ್ ಸಿಸ್ಟಮ್ಸ್ ವಿನ್ಯಾಸ ಮತ್ತು ಉತ್ಪಾದನೆ ಹಾಗೂ ಮಾಹಿತಿ ತಂತ್ರಜ್ನಾನದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಭಾರತೀಯ ಒಕ್ಕೂಟದ ಮಹಾನಿರ್ದೇಶಕರು ಮತ್ತು ಸಂಸ್ಥಾಪಕರಾದ ಜೈರಾಜ್ ಶ್ರೀನಿವಾಸ್‌ರವರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿಯನ್ನು ನೀಡಿ ಗೌರವಿಸಿದರು.


ಚಿತ್ತರಂಜನ್ ಬೋಳಾರ್ ರವರು ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟ್ರೀಯ, ರಾಜ್ಯ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಇವರಿಗೆ 2016ರಲ್ಲಿ 63ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರಿ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ಪರಿವರ್ತನ ಶ್ರೀ ರಾಜ್ಯ ಪ್ರಶಸ್ತಿ, ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಸಹಕಾರ ರತ್ನ ಪ್ರಶಸ್ತಿ ಜೊತೆಯಲ್ಲಿ ಸಂಘ -ಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಇವರನ್ನು ಹಲವಾರು ಸಹಕಾರ ಸಂಘ- ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದೆ. ಪ್ರಸ್ತುತ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ ಇವರ ಸಾಧನೆಯ ಹಿರಿಮೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಇವರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ಕರಾವಳಿ ಕ್ಷೇತ್ರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾದವರು. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾಗಿ,, ದ. ಕ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾಗಿ ಅವಿರೋಧ ಆಯ್ಕೆ, ದ.ಕ. ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘ ಇದರ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.

Related posts

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya
error: Content is protected !!