23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!