ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಗಾಂಧಿ ಭವನದಲ್ಲಿ ಆಯೋಜಿಸಿದ್ದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.
ಹಂಪಿ ವಿವಿ ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ , ಖ್ಯಾತ ಸಾಹಿತಿ ಹಂ. ಪ ನಾಗರಾಜಯ್ಯ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಇವರು ಬರಹಗಾರರ ಪ್ರಕಾಶಕರ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದರು.
ಪ್ರತಿವರ್ಷ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಕೊಡುವ ಪ್ರಶಸ್ತಿ ಯನ್ನು ಮುಖ್ಯ ಮಂತ್ರಿಯವರು ಪ್ರದಾನ ಮಾಡಿದರು.
ಸಾಹಿತ್ಯ ರತ್ನ ಪ್ರಶಸ್ತಿ ಯನ್ನು ಪಿ ಎಸ್ ಶಂಕರ್, ಯುವ ಸಾಹಿತ್ಯ ಪ್ರಶಸ್ತಿ ಕೌಶಿಕ್ ಕೂಡುರಸ್ತೆ, ಪುಸ್ತಕ ರತ್ನ ಪ್ರಶಸ್ತಿ ಶ್ರೀರಾಮ್ ಮತ್ತು ಮುದ್ರಣ ರತ್ನ ಪ್ರಶಸ್ತಿಯನ್ನು ಕೃಷ್ಣಮೂರ್ತಿ ಅವರಿಗೆ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ವಿವರಗಳನ್ನೊಳಗೊಂಡ ಪುಸ್ತಕವನ್ನು ಮುಖ್ಯಮಂತ್ರಿ ಯವರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಆರ್ ದೊಡ್ಡೇಗೌಡ , ಕಾರ್ಯಕಾರಿ ಸಮಿತಿ ಸದಸ್ಯರಾದ ಪದ್ಮಲತಾ ಮೋಹನ್ ನಿಡ್ಲೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.