25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್, ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ , ಮಹೇಶ. ಕೆ , ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಜಗನ್ನಾಥ ಎಮ್ ಉಪಸ್ಥಿತರಿದ್ದರು.

ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಥಿತಿಗಳನ್ನು ಮುಖ್ಯೋಪಾಧ್ಯಾಯರು ಸ್ವಾಗತಿಸಿ ಶಿಕ್ಷಕರಾದ ಕೃಷ್ಣ ಕುಮಾರ್ ಧನ್ಯವಾದವಿತ್ತರು. ಶಿಕ್ಷಕಿಯಾದ ಶ್ರೀಮತಿ ಉಷಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya
error: Content is protected !!