24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಸಂಪ್ರದಾಯದಂತೆ ಭತ್ತದ ನಾಟಿಯನ್ನು ನೆರವೇರಿಸಲಾಯಿತು.
ಇಲ್ಲಿ ಬೆಳೆದ ಭತ್ತದ ತೆನೆಗಳನ್ನು ಚೌತಿ ಸಂದರ್ಭ ದೇಗುಲಕ್ಕೆ ಸಮರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು ಮಾತನಾಡಿ “ಗದ್ದೆಗಳನ್ನು ಹಡಿಲು ಬಿಡದೆ ಸಾಗುವಳಿ ಮಾಡಬೇಕು. ಇಂದು ಗದ್ದೆ ಬೇಸಾಯ ಬಹಳ ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಈ ಬಗ್ಗೆ ಯುವಜನತೆ ಹೆಚ್ಚಿನ ಉತ್ಸಾಹ ತೋರಬೇಕು. ನಾವು ತಿನ್ನುವ ಅನ್ನವನ್ನು ನಾವೇ ಬೆಳೆಯಬೇಕಾದ ಅಗತ್ಯವಿದೆ”ಎಂದು ಹೇಳಿದರು.


ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳಾದ ದಿನೇಶ ಗೌಡ, ಅಂಬಾ ಬಿ.ಆಳ್ವ, ಉಮೇಶ್ ಕೇಳ್ತಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!