September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ ಸಮಾರಂಭ ಇತ್ತೀಚೆಗೆ ನಡೆಯಿತು.

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ ಚಟುವಟಿಕೆಗಳನ್ನು ಡಿಜಿಟಲ್ ಆಗಿ ಉದ್ಘಾಟಿಸಿ, ಪ್ರಮಾಣವಚನವನ್ನು ಬೋದಿಸಿದರು.

ನಾಯಕನಾದವನು ಇತರರಿಗೆ ಮಾದರಿಯಾಗಿದ್ದು, ಬದ್ಧತೆಯೊಂದಿಗೆ, ಸ್ವಸಾಮರ್ಥ್ಯದಿಂದ, ಇತರರನ್ನು ಒಗ್ಗೂಡಿಸಿಕೊಂಡು ಕೈಗೊಂಡ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ನೂತನ ನಾಯಕರಿಗೆ ಸಲಹೆ ನೀಡಿ, ಶುಭ ಹಾರೈಸಿದರು.

ನೂತನ ವಿದ್ಯಾರ್ಥಿ ಸಂಸತ್ತಿನ ನಾಯಕ ರಘೋತ್ತಮ್, ಉಪನಾಯಕ ಆಯಷ್, ಸದಸ್ಯರಾದ ನಿಶ್ಚಲ್, ಸಮ್ಮೇದ್, ಆದಿತ್ಯ ಆರಿಗ,  ರಕ್ಷಣ್, ಆಶೀಶ್ ಕಾಮತ್ ಪ್ರಮಾಣವಚನ ಸ್ವೀಕರಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಯಶ್ವಿತಾ ಸ್ವಾಗತಿಸಿ, ಪ್ರಾಪ್ತಿ ವಂದಿಸಿ, ಅನನ್ಯ  ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!