September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಸಮಸ್ಯೆ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಭಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ ಅನುಮತಿ ಸಿಗದೇ ಇರುವುದು.ಈ ಭಾಗದ ವಿದ್ಯುತ್‌ ಸಂಪರ್ಕಕ್ಕೆ ಅಡ್ಡಿಯಾಗಿದೆ ಎಂದು ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
error: Content is protected !!