April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಬೆಳ್ತಂಗಡಿ ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಫ್ಟಿಸ್ಟ್ ಡಿಸೋಜ ರವರು ಜಿಲ್ಲೆಯ ವಿಕಲಚೇತನರ ಸಮಸ್ಯೆಗಳ ಬಗ್ಗೆ ಅವರಿಗೆ ಲಿಖಿತ ಮನವಿ ಅರ್ಪಿಸಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು, ಇಂತಹ ಸಮಸ್ಯೆಗಳಿದ್ದರೆ ವಿಳಂಬ ಮಾಡದೆ ತಕ್ಷಣ ಪತ್ರ ವ್ಯವಹಾರ ಮಾಡುವ ಬಗ್ಗೆ ನಿರ್ದೇಶನ ನೀಡಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಯಾವುದೇ ಸಮಸ್ಯೆಗಳಿದ್ದರೆ ಆಡಳಿತ ವ್ಯವಸ್ಥೆಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಈರಣ್ಣ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya
error: Content is protected !!