ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41ವ) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಜೂ.27 ರಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್‌ ಎಸ್‌ ರವರು ಜೂ. 27 ರಂದು ಅಪರಾಧಿಗೆ ಕಲಂ: 498 (ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಸಜೆ ಹಾಗೂ 10 ಸಾವಿರ ರೂ ದಂಡ ಹಾಗೂ ಕಲಂ: 304 ಐಪಿಸಿ ಅಪರಾಧಕ್ಕಾಗಿ 7 ವರ್ಷಗಳ ಕಠಿಣ ಸಜೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

ಘಟನೆ ವಿವರ: ಬೆಳ್ತಂಗಡಿ ತಾಲೂಕು ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ ಎಂಬಾತ ಸೌಮ್ಯ ಫ್ರಾನ್ಸಿಸ್ ರವರನ್ನು ಮದುವೆಯಾದ ಸ್ವಲ್ಪ ಸಮಯದ ನಂತರ ಪತ್ನಿಯೊಂದಿಗೆ ವಿನಾಕಾರಣ ಕ್ಷುಲ್ಲಕ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದವನು , ದಿನಾಂಕ 07.01.2021 ರಂದು ರಾತ್ರಿ ಸುಮಾರು 7.30 ಗಂಟೆಯಿಂದ 8.30 ಗಂಟೆಯ ಮದ್ಯೆ ತನ್ನ ಮನೆಯಲ್ಲಿ ಹೆಂಡತಿಯ ಜೊತೆ ಮಾತಿನ ಗಲಾಟೆ ನಡೆಸಿ ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ದಿನಾಂಕ:08/01/2021 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಠಾಣೆಯಲ್ಲಿ ಅಕ್ರ: 02/2021 ಕಲಂ: 498(ಎ) 302 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಬಳಿಕ ಆ ಸಮಯದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರು ಪ್ರಕರಣದಲ್ಲಿ ಆರೋಪಿ ಜಾನ್ಸನ್ ಕೆ ಎಂ ಎಂಬಾತನನ್ನು ಬಂಧಿಸಿ ಸೂಕ್ತ ಸಾಕ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದರು.

Leave a Comment

error: Content is protected !!