23.3 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ


ಪೆರಾಡಿ : ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪೆರಾಡಿ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದ್ರೆ, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಯುವವಾಹಿನಿ ಮೂಡಬಿದ್ರೆ ಮತ್ತು ವೇಣೂರು ಘಟಕ ಹಾಗೂ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ ಇದರ ಸಹಯೋಗದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ, ಯೆನಪೋಯ ದಂತ ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯರ ತಂಡದವರಿಂದ ಉಚಿತ ದಂತ ಚಿಕಿತ್ಸಾ ಶಿಬಿರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಮಂಗಳೂರು ಇವರ ಸಹಕಾರದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜು.2 ರಂದು ಬೆಳಗ್ಗೆ 9.30ರಿಂದ 12.30 ವರೆಗೆ ಸಂತೃಪ್ತಿ ಸಭಾಭವನ, ಪೆರಿಂಜೆಯಲ್ಲಿ ನಡೆಯಲಿದೆ,
ಉಚಿತ ಚಿಕಿತ್ಸೆಗಳಾದ ಚರ್ಮ, ಎಲುಬು, ಕಣ್ಣು, ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಜನರಲ್ ಚೆಕ್ ಅಪ್, ಇ.ಸಿ.ಜಿ., ದಂತ ಚಿಕಿತ್ಸೆ ತಪಾಸಣೆ ಮಾಡಲಾಗುವುದು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!