ಮಾಲಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಸ್ಸಾನ ಡಿಸೋಜಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ. 30 ರಂದು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.
ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ನೀರು, ಚರಂಡಿ,ರಸ್ತೆಯ ಬಗ್ಗೆ ಹಲವಾರು ಚರ್ಚೆಗಳು ನಡೆದವು.
ಗ್ರಾಮಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷ ದಿನೇಶ್ ಡಿ ಕರ್ಕೆರಾ, ಸದಸ್ಯರರಾದ ಬೆನೆಡಿಕ್ಟ್ ಮಿರಾಂದ, ವಸಂತ ಪೂಜಾರಿ, ಸೆಲೆಸ್ಟಿನ್ ಡಿಸೋಜಾ, ಜಯಂತಿ, ತುಳಸಿ ಬಿ, ಕೆ. ಸುಧಾಕರ ಆಳ್ವ,ಪುನೀತ್ ಕುಮಾರ್, ರಾಜೇಶ, ಉಮೇಶ, ಐರಿನ್ ಮೋರಾಸ್, ಫರ್ಯಾನ ಅಲ್ತಾಫ್,ವಿದ್ಯಾ ಪಿ ಸಾಲಿಯಾನ್,ಎಸ್.ಬೇಬಿ ಸುವರ್ಣ,ರುಬೀನಾ ನವಾಝ್, ಗುಲಾಬಿ, ದಿನೇಶ್ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.