25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು.

ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇವರು ಜಿಎಸ್​ಟಿಯನ್ನು ಉದ್ಘಾಟಿಸಿದರು. ಅದರ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಸ್ನಾತ್ತಕೋತ್ತರ ವಿಭಾಗದಿಂದ ಜಿಎಸ್ಟಿ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ವರವೋ ಶಾಪವೋ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆಪ್ತ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ| ರವಿ ಎಂ ಎನ್ ಇವರು ಪ್ರಸ್ತಾವನೆಗೆದರು. ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ಪದ್ಮನಾಭ ಇವರು ಜಿಎಸ್‌ಟಿ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಅಧ್ಯಕ್ಷತೆ ವಹಿಸಿದರು. ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಕುಮಾರಿ ರಮ್ಯಾ ಸ್ವಾಗತಿಸಿ ಕುಮಾರಿ ಸುಚಿತ್ರ ವಂದಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya
error: Content is protected !!