ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ ಶ್ರೀಮಾನ್ ತುಳಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಔಷಧೀಯ ಗಿಡಗಳ ಮಹತ್ವದ ಬಗ್ಗೆ ತಿಳಿಸಿ, ಔಷಧೀಯ ಗಿಡಗಳನ್ನು ಗುರುತಿಸಿ ಅವುಗಳನ್ನು ಪೋಷಿಸಿ,ರಕ್ಷಿಸುವ ಕೆಲಸವನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ತಿಳಿಸಿದರು.
ಅಧ್ಯಾಪಕಸುರೇಶ್ ಎಂ.ಟಿ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಣ ಸಂಸ್ಥೆಯ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.