26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!