30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

ಮುಂಡಾಜೆ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜಿನಿಯವರ ಅಧ್ಯಕ್ಷತೆಯಲ್ಲಿ ಜು.1 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ರಿಶಾ ಪಟವರ್ಧನ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರುಗಳಾದ ವಿಮಲ ಎಚ್.ಎಸ್, ಸುಮಲತಾ, ಯಶೋಧ, ಅಶ್ವಿನಿ, ಎ ರಾಮಣ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಗಣೇಶ ಬಂಗೇರ, ರವಿಚಂದ್ರ, ಜಗದೀಶ, ಅಂಗನವಾಡಿ ಕಾರ್ಯಕರ್ತೆ ಅಮ್ಮಿ ಬಿ.ಪಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆ ಹಾಗೂ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya
error: Content is protected !!